HomeLatest NewsBREAKING: ಜೋಗ್ ಫಾಲ್ಸ್ ನ ಅಪಾಯಕಾರಿ ಸ್ಥಳದಲ್ಲಿ ನಿಂತು ವಿಡಿಯೋ ಚಿತ್ರೀಕರಣ: ಯೂಟ್ಯೂಬರ್ ವಿರುದ್ಧ ಪ್ರಕರಣ...

BREAKING: ಜೋಗ್ ಫಾಲ್ಸ್ ನ ಅಪಾಯಕಾರಿ ಸ್ಥಳದಲ್ಲಿ ನಿಂತು ವಿಡಿಯೋ ಚಿತ್ರೀಕರಣ: ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಜೋಗ್ ಫಾಲ್ಸ್ ನ ಅಪಾಯಕಾರಿ ಸ್ಥಳಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜಾಲಹಳ್ಳಿ ಮೂಲದ ಗೌತಮ್ ಅರಸು (32) ಹಾಗೂ ಸೊರಬ ಮೂಲದ ಗೈಡ್ ಸಿದ್ದರಾಜು ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌತಮ್ ಅರಸು, ಜೋಗ್ ಫಾಲ್ಸ್ ನ ರಾಜಾ ಫಾಲ್ಸ್ ನ ಬಂಡೆಯ ಬಳಿ ನಿಂತು ವಿಡಿಯೋ ಮಾಡಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದರು. ಅಪಾಯಕಾರಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular