HomeLatest NewsBIG NEWS: ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು ನಾಪತ್ತೆ!

BIG NEWS: ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು ನಾಪತ್ತೆ!

ಕಾರವಾರ: ಜೋಗನ ಹಕ್ಕಲು ಫಾಲ್ಸ್ ನೋಡಲೆಂದು ಹೋಗಿದ್ದ ಯುವಕ ಕಾಲು ಜಾರಿಬಿದ್ದು ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ನಡೆದಿದೆ.

ಸೋಮನಹಳ್ಳಿ ಗ್ರಾಮದ ಪವನ್ ಗಣಪತಿ ಜೋಗಿ (24) ನಾಪತ್ತೆಯಾಗಿರುವ ಯುವಕ. ಸ್ನೇಹಿತ ವಾಸುದೇವ್ ಜೊತೆ ಜಲಪಾತ ನೋಡಲು ಹೋಗಿದ್ದ. ಜಲಪಾತದ ಬಳಿ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನು ದಾಟುವಾಗ ಏಕಾಏಕಿ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಗೆಳೆಯನ ಕಣ್ಮುಂದೆಯೇ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಯುವಕನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular