ಎಲೆಕ್ಟ್ರಿಕ್ ವಾಹನವನ್ನು ಮುಂಗಡ ಕಾಯ್ದಿರಿಸಲು ಫ್ಲಿಪ್‌ಕಾರ್ಟ್ ಜೊತೆ ಕೈ ಜೋಡಿಸಿದ odysse

ಮುಂಬೈ ಮೂಲದ ಒಡಿಸ್ಸೆ ಎಲೆಕ್ಟ್ರಿಕ್ ವೆಹಿಕಲ್ಸ್ ಕಂಪೆನಿಯು ತನ್ನ ಗ್ರಾಹಕರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಆನ್‌ಲೈನ್‌ನಲ್ಲಿಯೇ ಮುಂಗಡ ಕಾಯ್ದಿರಿಸುವ ಅವಕಾಶವನ್ನು ಕಲ್ಪಿಸಿದೆ. ಇದಕ್ಕಾಗಿ ಭಾರತದ ಅತಿದೊಡ್ಡ ಇ-ಕಾಮರ್ಸ್ ಮಾರುಕಟ್ಟೆ ಕಂಪೆನಿ ಫ್ಲಿಪ್‌ಕಾರ್ಟ್‌ನೊಂದಿಗೆ ತನ್ನ ಪಾಲುದಾರಿಕೆಯನ್ನು ಪ್ರಕಟ ಮಾಡಿದೆ.

ಈ ಒಪ್ಪಂದದ ಭಾಗವಾಗಿ ಒಡಿಸ್ಸೆ ಮತ್ತು ಫ್ಲಿಪ್‌ಕಾರ್ಟ್ ಕಂಪೆನಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮುಕ್ತ ಖರೀದಿಯನ್ನು ಹೆಚ್ಚುಗೊಳಿಸುವುದಕ್ಕಾಗಿ ವಿಶೇಷ ಡೀಲ್‌ಗಳು, ರಿಯಾಯಿತಿಗಳು ಮತ್ತು ಆಕರ್ಷಕ ಸಾಲ ಸೌಲಭ್ಯ ಯೋಜನೆಗಳನ್ನು ನೀಡಲಿವೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಒಡಿಸ್ಸೆ ಎಲೆಕ್ಟ್ರಿಕ್ ವೆಹಿಕಲ್ಸ್ ನ ಸಿಇಒ ನೆಮಿನ್ ವೋರಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಫ್ಲಿಪ್‌ಕಾರ್ಟ್‌ನೊಂದಿಗಿನ ನಮ್ಮ ಪಾಲುದಾರಿಕೆಯು ನಮ್ಮ ವ್ಯಾಪ್ತಿಯನ್ನು ಹೆಚ್ಚಿನ ಗ್ರಾಹಕರಿಗೆ ವಿಸ್ತರಿಸಲು ಅನುಕೂಲ ಮಾಡಿಕೊಡಲಿದೆ. ನಾವು ಇ-ಕಾಮರ್ಸ್‌‌ನಲ್ಲಿ ಲಭ್ಯವಾಗಿರುವುದರಿಂದ ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಿ. ಈ ಮೂಲಕ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಇನ್ನಷ್ಟು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಇದು ಮುಂದಿನ ಭವಿಷ್ಯಕ್ಕೆ ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಕಂಪನಿಯು ತನ್ನ ಗ್ರಾಹಕರಿಗೆ ಆನ್‌ಲೈನ್ ಮೂಲಕ, ಸ್ಥಳದಲ್ಲೇ ಬುಕ್ಕಿಂಗ್ ಮೂಲಕ ಹಾಗೂ ಡೀಲರ್‌ಶಿಪ್‌ಗಳ ಮೂಲಕವು ಎಲೆಕ್ಟ್ರಿಕ್ ವಾಹನಗಳ ಖರೀದಿಯ ಅವಕಾಶವನ್ನು ಕಲ್ಪಿಸಲು ಎದುರುನೋಡುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read