
ಈ ಒಪ್ಪಂದದ ಭಾಗವಾಗಿ ಒಡಿಸ್ಸೆ ಮತ್ತು ಫ್ಲಿಪ್‌ಕಾರ್ಟ್ ಕಂಪೆನಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮುಕ್ತ ಖರೀದಿಯನ್ನು ಹೆಚ್ಚುಗೊಳಿಸುವುದಕ್ಕಾಗಿ ವಿಶೇಷ ಡೀಲ್‌ಗಳು, ರಿಯಾಯಿತಿಗಳು ಮತ್ತು ಆಕರ್ಷಕ ಸಾಲ ಸೌಲಭ್ಯ ಯೋಜನೆಗಳನ್ನು ನೀಡಲಿವೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಒಡಿಸ್ಸೆ ಎಲೆಕ್ಟ್ರಿಕ್ ವೆಹಿಕಲ್ಸ್ ನ ಸಿಇಒ ನೆಮಿನ್ ವೋರಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಫ್ಲಿಪ್‌ಕಾರ್ಟ್‌ನೊಂದಿಗಿನ ನಮ್ಮ ಪಾಲುದಾರಿಕೆಯು ನಮ್ಮ ವ್ಯಾಪ್ತಿಯನ್ನು ಹೆಚ್ಚಿನ ಗ್ರಾಹಕರಿಗೆ ವಿಸ್ತರಿಸಲು ಅನುಕೂಲ ಮಾಡಿಕೊಡಲಿದೆ. ನಾವು ಇ-ಕಾಮರ್ಸ್‌ನಲ್ಲಿ ಲಭ್ಯವಾಗಿರುವುದರಿಂದ ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಿ. ಈ ಮೂಲಕ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಇನ್ನಷ್ಟು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಇದು ಮುಂದಿನ ಭವಿಷ್ಯಕ್ಕೆ ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಕಂಪನಿಯು ತನ್ನ ಗ್ರಾಹಕರಿಗೆ ಆನ್‌ಲೈನ್ ಮೂಲಕ, ಸ್ಥಳದಲ್ಲೇ ಬುಕ್ಕಿಂಗ್ ಮೂಲಕ ಹಾಗೂ ಡೀಲರ್‌ಶಿಪ್‌ಗಳ ಮೂಲಕವು ಎಲೆಕ್ಟ್ರಿಕ್ ವಾಹನಗಳ ಖರೀದಿಯ ಅವಕಾಶವನ್ನು ಕಲ್ಪಿಸಲು ಎದುರುನೋಡುತ್ತಿದೆ.

