HomeBusinessರೈತರಿಗೆ ಗುಡ್ ನ್ಯೂಸ್: ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ

ರೈತರಿಗೆ ಗುಡ್ ನ್ಯೂಸ್: ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ

ಬೆಂಗಳೂರು: ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತವಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆ ಯೋಜನೆಯಡಿ ಹೈಬ್ರಿಡ್ ಜೋಳ, ಬಿಳಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ. ಇದಲ್ಲದೆ, ರೈತರಿಂದ ಖರೀದಿಸುವ ಮಿತಿ ಹೆಚ್ಚಳಕ್ಕೆ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಅನುಸಾರ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಂತಿಮ ಆದೇಶ ಹೊರ ಬೀಳಬೇಕಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಸೂಚನೆ ನೀಡಿದೆ. ಮುಕ್ತ ಮಾರುಕಟ್ಟೆಯಲ್ಲಿ ಜೋಳದ ಬೆಲೆ ಕ್ವಿಂಟಲ್ ಗೆ 2,200 ರೂ.ಗೆ ಕುಸಿತ ಕಂಡಿದೆ. ಜೋಳದ ಕೊಯ್ಲು ಆರಂಭವಾಗಿರುವ ಹೊತ್ತಲ್ಲೇ ಮಾರುಕಟ್ಟೆಯಲ್ಲಿ ದರ ಕುಸಿತವಾದ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಕ್ಕೆ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂ.ಎಸ್.ಪಿ.ಯಡಿ ಎರಡು ಲಕ್ಷ ಕ್ವಿಂಟಲ್ ಬಿಳಿ ಜೋಳ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕನಿಷ್ಠ ಹೈಬ್ರಿಡ್ ಜೋಳಕ್ಕೆ 2970 ರೂ., ಮಾಲ್ದಂಡಿ ಬಿಳಿ ಜೋಳಕ್ಕೆ 2990 ರೂಪಾಯಿ(ಬೆಂಬಲ ಬೆಲೆಯ ಪ್ರಕಾರ) ದರ ನಿಗದಿ ಮಾಡಿದ್ದು, ಪ್ರತಿ ಎಕರೆಗೆ 10 ಕ್ವಿಂಟಲ್ ನಂತೆ ರೈತರು ಹೊಂದಿರುವ ಹಿಡುವಳಿ ಆಧಾರದಲ್ಲಿ ಖರೀದಿ ಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಜೋಳ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ್ ದಡೆಸುಗೂರು, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮಗೌಡ ಬೆಳಗುರ್ಕಿ ನೇತೃತ್ವದ ನಿಯೋಗದಿಂದ ಆಹಾರ ಇಲಾಖೆ ಕಾರ್ಯದರ್ಶಿ ರೇಜು ಮತ್ತು ಆಯುಕ್ತೆ ಕನಗವಲ್ಲಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular