HomeLatest NewsBREAKING : 'ಬಿಗ್ ಬಾಸ್' ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಜಾಲಿವುಡ್...

BREAKING : ‘ಬಿಗ್ ಬಾಸ್’ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋಸ್.!

ಬೆಂಗಳೂರು : ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್ ಸ್ಟುಡಿಯೋಸ್ ಹೈಕೋರ್ಟ್ ಮೊರೆ ಹೋಗಿದೆ. ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್ ನೀಡಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿದೆ. ತುರ್ತು ವಿಚಾರಣೆ ನಡೆಸುವಂತೆ ವಕೀಲರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2 :30 ರ ವೇಳೆಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸೀಜ್ ಆಗಿದ್ದು, ಈಗಲ್’ಟನ್ ರೆಸಾರ್ಟ್ ಗೆ 17 ಮಂದಿ ಸ್ಪರ್ಧಿಗಳು ಶಿಫ್ಟ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದು, , ಈಗಲ್’ಟನ್ ರೆಸಾರ್ಟ್ ಗೆ 17 ಮಂದಿ ಸ್ಪರ್ಧಿಗಳು ಶಿಫ್ಟ್ ಆಗಿದ್ದಾರೆ. ಸ್ಪರ್ಧಿಗಳಿಗೆ ಮೊಬೈಲ್ ಬಳಸದಂತೆ ಸೂಚನೆ ನೀಡಲಾಗಿದೆ. ಹಾಗೂ ಅವರಿಗೆ ಟಿವಿ ನೋಡುವುದಕ್ಕೂ ಕೂಡ ನಿರ್ಬಂಧ ಹೇರಲಾಗಿದೆ.ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶುರುವಾದ ಎರಡನೇ ವಾರಕ್ಕೆ ಬಿಗ್ ಬಾಸ್ ಹೌಸ್ ಬಂದ್ ಆಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲಾಗಿದೆ.

ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಗಳನ್ನು ಹಾಕಿ ಕನ್ನಡ ಬಿಗ್ ಬಾಸ್ ಸೀಜನ್ -12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್ ಬಾಸ್ ಶೋ ಹಾಗೂ ಸೆಟ್ ಗಳಲ್ಲಿ ಪರಿಸರ ನಿಯಮ ಉಲ್ಲಂಘನೆ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು.ಅಲ್ಲದೇ ಜಾಲಿವುಡ್ ಸ್ಟುಡಿಯೋವಾಗಲಿ, ಬಿಗ್ ಬಾಸ್ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ. ಅನಧಿಕೃತವಾಗಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ನೀಡಲೆಂದು ಜಾಲಿವುಡ್ ಸ್ಟುಡಿಯೋ ಸ್ಥಳಕ್ಕೆ ತೆರಳಿದಾಗ ಜಾಲಿವುಡ್ ಸ್ಟುಡಿಯೋಸ್ ಆಗಲಿ, ಬಿಗ್ ಬಾಸ್ ಶೋ ಟೀಂ ಆಗಲಿ ನೋಟಿಸ್ ತೆಗೆದುಕೊಳ್ಳಲು ಹಿಂದೇಟು ಹಾಕಿವೆ. ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಗೆ ಬೀಗ ಉದ್ರೆ ಹಾಕಿದ್ದಾರೆ, ಬಿಗ್ ಬಾಸ್ ಶೋ ಹೌಸ್ ಗೂ ಬೀಗ ಜಡಿಯಲಾಗಿದ್ದು, ಬಿಗ್ ಬಾಸ್ ಶೋ ಬಂದ್ ಆಗಿದೆ. ಬಿಗ್ ಬಾಸ್ ಸ್ಪರ್ಧಿಗಳನ್ನು ಸ್ಥಳದಿಂದ ಹೊರಕಳುಹಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular