ವಿದ್ಯಾರ್ಥಿಗಳಿಗೆ ʼಶೂನಿಂದ ಹೊಡೀತೀನಿʼ ಎಂದ ನಿರ್ದೇಶಕಿ ; ತೀವ್ರಗೊಂಡ ಪ್ರತಿಭಟನೆ | Watch

ದೆಹಲಿ ಸ್ಕೂಲ್ ಆಫ್ ಜರ್ನಲಿಸಂನಲ್ಲಿ (ಡಿಎಸ್‌ಜೆ) ಮಂಗಳವಾರ ವಿದ್ಯಾರ್ಥಿಗಳು ಹಾಗೂ ನಿರ್ದೇಶಕಿ ಭಾರತಿ ಘೋರೆ ನಡುವೆ ದೊಡ್ಡ ಗದ್ದಲವೇ ನಡೆದಿದೆ. ವಿದ್ಯಾರ್ಥಿಗಳು ಶಾಲೆಯ ದುಬಾರಿ ಶುಲ್ಕ ಹಾಗೂ ಸೌಲಭ್ಯಗಳ ಕೊರತೆಯ ಬಗ್ಗೆ ದೂರು ನೀಡಲು ಹೋದಾಗ, ನಿರ್ದೇಶಕಿ “ಶೂನಿಂದ ಹೊಡೀತೀನಿ” ಎಂದು ಬೆದರಿಕೆ ಹಾಕಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿದ್ಯಾರ್ಥಿಗಳು, ದುಬಾರಿ ಶುಲ್ಕ ವಸೂಲಿ ಮಾಡುತ್ತಿದ್ದರೂ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ವೈ-ಫೈ, ಎಸಿ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಶಾಲೆಯ ಆಡಳಿತವು ವಿದ್ಯಾರ್ಥಿಗಳಿಗೆ ಸಹಕಾರ ನೀಡುತ್ತಿಲ್ಲ ಹಾಗೂ ಹಣಕಾಸಿನ ವಿಚಾರದಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿದ್ದಾರೆ.

ಆದರೆ, ನಿರ್ದೇಶಕಿ ಭಾರತಿ ಘೋರೆ ಈ ಆರೋಪಗಳನ್ನು ನಿರಾಕರಿಸಿದ್ದಾರೆ. ವಿದ್ಯಾರ್ಥಿಗಳು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು, ಅದಕ್ಕೆ ಪ್ರತಿಕ್ರಿಯೆಯಾಗಿ ನಾನು ಹಾಗೆ ಮಾತನಾಡಿದೆ. ವಿದ್ಯಾರ್ಥಿಗಳು ಕ್ಷಮೆಯಾಚಿಸಿದ್ದಾರೆ, ಈ ವಿಷಯವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಘಟನೆಯಿಂದ ಶಾಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read