BREAKING: ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಇಂಗ್ಲೆಂಡ್: ಅಚ್ಚರಿ ನಿರ್ಧಾರ ಪ್ರಕಟಿಸಿ ನಾಯಕ ಸ್ಥಾನದಿಂದ ಕೆಳಗಿಳಿದ ಜೋಸ್ ಬಟ್ಲರ್

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ಗುಂಪು ಹಂತದಲ್ಲಿ ಸೋತ ನಂತರ ಜೋಸ್ ಬಟ್ಲರ್ ಇಂಗ್ಲೆಂಡ್ ವೈಟ್-ಬಾಲ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಐಸಿಸಿ ಏಕದಿನ ಪಂದ್ಯಗಳಲ್ಲಿ ಸತತ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿದೆ, 2023 ರ ಏಕದಿನ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲೂ ಸೋತಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಸೋಲು ಅನುಭವಿಸಿದ ನಂತರ ಇಂಗ್ಲೆಂಡ್ 2025 ರ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದೆ.

ಮಾರ್ಚ್ 1 ರ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ ಮನ್ ಬಟ್ಲರ್ ತ್ರೀ ಲಯನ್ಸ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದಾರೆ.

ನಾನು ಇಂಗ್ಲೆಂಡ್ ತಂಡದ ನಾಯಕತ್ವದಿಂದ ಕೆಳಗಿಳಿಯಲಿದ್ದೇನೆ. ಇದು ನನಗೆ ಸರಿಯಾದ ನಿರ್ಧಾರ ಮತ್ತು ತಂಡಕ್ಕೆ ಸರಿಯಾದ ನಿರ್ಧಾರ ಎಂದು ಬಟ್ಲರ್ ಹೇಳಿದ್ದು, ಬೇರೆ ಯಾರಾದರೂ ತಂಡವನ್ನು ಮುನ್ನಡೆಸುತ್ತಾರೆ. ಇಂಗ್ಲೆಂಡ್ ಪರ ಆಡುವುದನ್ನು ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read