ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2024-25 ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ನವೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಒಟ್ಟು 12 ತಿಂಗಳುಗಳ ಅಪರಂಟಿಸ್ ತರಬೇತಿಯಲ್ಲಿ ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು.

ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ನವೆಂಬರ್ 25 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಬೆಂಗಳೂರು ನಗರ ಜಿಲ್ಲೆಯಲ್ಲಿ ವಾಸಿಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22028059, ಇ-ಮೇಲ್ – urbaninformation2016@gmail.com ಹಾಗೂ ಮೊ.ಸಂ: 9480841219 ಗೆ ಕಚೇರಿ ಸಮಯದಲ್ಲಿ ಮಾತ್ರ ಸಂರ್ಪಕಿಸಬಹುದಾಗಿದೆ ಎಂದು ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇತರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read