HomeKarnatakaBIG NEWS: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

BIG NEWS: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 48 ವರ್ಷ ವಯಸ್ಸಾಗಿತ್ತು.

ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಕಳೆದ 6 ತಿಂಗಳಿಂದ ಬೆಳ್ತಂಗಡಿ ಸುದ್ದಿಬಿಡುಗಡೆ ವಾರಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು, ವಾಂತಿಯಿಂದ ಬಳಲುತ್ತಿದ್ದ ಅವರನ್ನು ಮೂಡಬಿದರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಕೆ ಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಅಲೆ, ವೆಬ್ ದುನಿಯಾ, ಕಸ್ತೂರಿ ಚಾನಲ್, ವಿಜಯವಾಣಿ ಸಂಸ್ಥೆಗಳಲ್ಲಿಯೂ ಭುವನೇಂದ್ರ ಕಾರ್ಯನಿರ್ವಹಿಸಿದ್ದರು. ಮೃತರು ತಂದೆ-ತಾಯಿ,ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular