ಫೆ. 4, 5 ವಿಜಯಪುರದಲ್ಲಿ ಪತ್ರಕರ್ತರ ಸಮ್ಮೇಳನ

ವಿಜಯಪುರ: ವಿಜಯಪುರದಲ್ಲಿ ಫೆಬ್ರವರಿ 4, 5 ರಂದು 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 4 ರಂದು ಬೆಳಿಗ್ಗೆ 10.30 ಕ್ಕೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಚಿವರು, ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ.

ಫೆಬ್ರವರಿ 5 ರಂದು ಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಿಜಯಪುರದ ಪತ್ರಿಕಾ ಭವನದಲ್ಲಿ ಸಮ್ಮೇಳನದ ಸಿದ್ಧತೆಗಾಗಿ ವಿವಿಧ ಸಮಿತಿಗಳ ಸಭೆ ನಡೆಸಿದ್ದಾರೆ. ಈ ಬಾರಿ ನವ ಮಾಧ್ಯಮ ಮತ್ತು ಪತ್ರಕರ್ತರು, ಸುದ್ದಿ ಮನೆ ಮತ್ತು ಮಹಿಳೆಯರು, ಗಡಿ ಭಾಗದ ಮಾಧ್ಯಮಗಳ ಪಾತ್ರ ಕುರಿತಂತೆ ಗೋಷ್ಠಿಗಳು ನಡೆಯಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read