HomeKarnatakaರಾಜ್ಯದಲ್ಲಿಂದು ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಚಾಲನೆ: ಜೆ.ಪಿ. ನಡ್ಡಾ ಸೇರಿ ನಾಯಕರಿಂದ ವಿವಿಧೆಡೆ...

ರಾಜ್ಯದಲ್ಲಿಂದು ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಚಾಲನೆ: ಜೆ.ಪಿ. ನಡ್ಡಾ ಸೇರಿ ನಾಯಕರಿಂದ ವಿವಿಧೆಡೆ ಉದ್ಘಾಟನೆ

ಬೆಂಗಳೂರು: ವಿಜಯಪುರ ಜಿಲ್ಲೆಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಜೆ.ಪಿ. ನಡ್ಡಾ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಹೆಲಿಕಾಪ್ಟರ್ ನಲ್ಲಿ ವಿಜಯಪುರ ಸೈನಿಕ ಶಾಲೆ ಹೆಲಿಪ್ಯಾಡ್ ಗೆ ಆಗಮಿಸುವರು.

ಬೆಳಗ್ಗೆ 11:40ಕ್ಕೆ ವಿಜಯಪುರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜ್ಞಾನ ಯೋಗಾಶ್ರಮದಿಂದ ನಿರ್ಗಮಿಸಲಿರುವ ಜೆ.ಪಿ. ನಡ್ಡಾ 12.05 ಕ್ಕೆ ನಾಗಠಾಣ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟಿಸಲಿದ್ದಾರೆ. ಮನೆ ಮನೆ ಅಭಿಯಾನ, ಕರಪತ್ರ ವಿತರಣೆ, ಫಲಾನುಭವಿಗಳ ಸಭೆ ನಡೆಸಲಿದ್ದಾರೆ. ಗೋಡೆ ಬರಹ ಮತ್ತು ಮಿಸ್ ಕಾಲ್ ಸದಸ್ಯತ್ವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿ.ಎಲ್.ಡಿ.ಇ. ಎಂಜಿನಿಯರಿಂಗ್ ಕಾಲೇಜು ಎದುರಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

12:30 ಕ್ಕೆ ನಾಗಠಾಣದಿಂದ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಗೆ ಆಗಮಿಸುವ ಅವರು 1.25ಕ್ಕೆ ಸಿಂದಗಿಯ ಆರ್.ಡಿ ಪಾಟೀಲ್ ಮೈದಾನಕ್ಕೆ ಆಗಮಿಸಲಿದ್ದು, ಸಿಂದಗಿಯ ಚೌಧರಿ ಲೇಔಟ್ ನಲ್ಲಿ ನಡೆಯುವ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2:25ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ

ನಾಯಕರಿಂದ ಚಾಲನೆ:

ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ಬಿಜೆಪಿ ಬೂತ್ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದ್ದು, ರಾಜ್ಯದ ವಿವಿಧಡೆ ನಾಯಕರು ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ನಾಗಠಾಣ ಮತ್ತು ಸಿಂದಗಿಯಲ್ಲಿ ಚಾಲನೆ ನೀಡಲಿದ್ದಾರೆ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ನಾಗಠಾಣ ಮತ್ತು ಸಿಂದಗಿಗೆ ಭೇಟಿ ನೀಡಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಚಿಕ್ಕಬಳ್ಳಾಪುರದಲ್ಲಿ, ಕೇಂದ್ರ ಗಣಿ ಇಲಾಖೆಯ ಸಚಿವ ಪ್ರಹ್ಲಾದ್ ಜೋಶಿ ದಾವಣಗೆರೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾಬಸ್ ಪೇಟೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಜಯನಗರ, ಬಿಟಿಎಂ ಲೇಔಟ್, ಬಿಜೆಪಿ ರಾಜ್ಯ ಸಹ ಉಸ್ತುವಾರಿ ಡಿ.ಕೆ. ಅರುಣಾ ಮಹಾಲಕ್ಷ್ಮಿ ಲೇಔಟ್ ನಲ್ಲಿ ಅಭಿಯಾನಕ್ಕೆ ಚಾಲನೆ ನೀಡುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular