HomeKarnatakaಅಮಿತ್ ಶಾ ಬಂದು ಹೋದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ: ನಾಳೆಯಿಂದ ಜೆ.ಪಿ. ನಡ್ಡಾ ಮಿಂಚಿನ...

ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ: ನಾಳೆಯಿಂದ ಜೆ.ಪಿ. ನಡ್ಡಾ ಮಿಂಚಿನ ಸಂಚಾರ

ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಮಧ್ಯಾಹ್ನ ತುಮಕೂರಿನಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಅವರು ಭಾಗಿಯಾಗುವರು. ತುಮಕೂರು ಮತ್ತು ಮಧುಗಿರಿಯಲ್ಲಿ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ ನಡೆಯಲಿದ್ದು, ಸಭೆಯಲ್ಲಿ ನಡ್ಡಾ ಭಾಗವಹಿಸುವರು. ನಂತರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಸಂಜೆ ಚಿತ್ರದುರ್ಗದಲ್ಲಿ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಎಸ್ಸಿ, ಎಸ್ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿರುವ ನಡ್ಡಾ ಮಾದರ ಚೆನ್ನಯ್ಯ, ಸಿರಿಗೆರೆ ತರಳಬಾಳು ಮಠಕ್ಕೆ ಭೇಟಿ ನೀಡಲಿದ್ದಾರೆ. ದಾವಣಗೆರೆ ವಿಭಾಗದ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರೊಂದಿಗೆ ಸಭಾಲೋಚನೆ ನಡೆಸುವರು.

ಜನವರಿ 6ರಂದು ಬೆಳಿಗ್ಗೆ ಬೆಳ್ಳೂಡಿಯ ಕನಕ ಗುರು ಪೀಠ, ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠ, ಹರಿಹರದ ಪಂಚಮಸಾಲಿ ಮಠಕ್ಕೆ ಭೇಟಿ ನೀಡುವರು. ನಂತರ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಬೂತ್ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ತುಮಕೂರು ಜಿಲ್ಲೆ ಶಿರಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಗಳಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಭಾಗವಹಿಸಲಿದ್ದಾರೆ. ಅರುಣ್ ಸಿಂಗ್ ಇಂದು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಚಾರ ನಡೆಸಿ ಅಧಿಕೃತ ಕಾರ್ಯಕ್ರಮಗಳೊಂದಿಗೆ ಪಕ್ಷದ ಸಭೆ ಸಮಾವೇಶಗಳಲ್ಲಿಯೂ ಭಾಗವಹಿಸಿ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular