BIG NEWS : ಇಂದು ರಾಜ್ಯಕ್ಕೆ ಜೆ.ಪಿ ನಡ್ಡಾ ಭೇಟಿ, ಬೆಳಗಾವಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಳಗಾವಿ : ಇಂದು ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸುತ್ತಿದ್ದು , ಚಿಕ್ಕೋಡಿಯಲ್ಲಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಇಂದು ಮಾರ್ಚ್ 4, 2024 ರಿಂದ ಎರಡು ದಿನಗಳ (ಸೋಮವಾರ ಮತ್ತು ಮಂಗಳವಾರ) ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದು, ಅವರು ಅನೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ , ಚಿಕ್ಕೋಡಿಯಲ್ಲಿ ಬೂತ್ ಕಾರ್ಯಕರ್ತರ ಸಮಾವೇಶ ನಡೆಸಲಿದ್ದು, ಬೆಳಗಾವಿಯಲ್ಲಿ ಸ್ವನಿಧಿ ಯೋಜನೆಯ ಫಲಾನುಭವಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಚ್ 04 ರ ಸೋಮವಾರ ರಾತ್ರಿ 08:30 ಕ್ಕೆ ಕರ್ನಾಟಕದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಾರ್ಚ್ 05 ರ ಮಂಗಳವಾರ ಬೆಳಿಗ್ಗೆ 11:15 ಕ್ಕೆ ಚಿಕ್ಕೋಡಿಯ ಕಿವಾಡ್ ಮೈದಾನದಲ್ಲಿ ಬೂತ್ ಕಾರ್ಯಕರ್ತರ ಸಮ್ಮೇಳನವನ್ನುದ್ದೇಶಿಸಿ ನಡ್ಡಾ ಮಾತನಾಡಲಿದ್ದಾರೆ. ಮಧ್ಯಾಹ್ನ 02:15 ಕ್ಕೆ ಬೆಳಗಾವಿಯ ಐಟಿಸಿ ವೆಲ್ಕಮ್ ಹೋಟೆಲ್ ನಲ್ಲಿ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಸಂಜೆ 5.15ಕ್ಕೆ ಬೆಳಗಾವಿಯ ಜಿರ್ಗೆ ಸಭಾಂಗಣದಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read