ತಡರಾತ್ರಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಪವನ್ ಕಲ್ಯಾಣ್

ಹೈದರಾಬಾದ್: ಶನಿವಾರ ತಡರಾತ್ರಿ ಎನ್‌ಟಿಆರ್ ಜಿಲ್ಲೆಯ ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿ ಜನಸೇನಾ ಪಕ್ಷದ(ಜೆಎಸ್‌ಪಿ) ಅಧ್ಯಕ್ಷ ಪವನ್ ಕಲ್ಯಾಣ್ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದಾರೆ.

ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನವನ್ನು ಪೊಲೀಸರು ತಡೆದ ನಂತರ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಜೆಎಸ್‌ಪಿ ಮುಖ್ಯಸ್ಥರು ವಿಜಯವಾಡಕ್ಕೆ ತೆರಳುತ್ತಿದ್ದಾಗ ಗರಿಕಪಾಡು ಚೆಕ್‌ ಪೋಸ್ಟ್‌ ನಲ್ಲಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆದರು. ಇದಾದ ಕೂಡಲೇ ವಾಹನದಿಂದ ಹೊರಬಂದ ಪವನ್ ಕಲ್ಯಾಣ್ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಜೆಎಸ್‌ಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಜೆಎಸ್‌ಪಿ ಕಾರ್ಯಕರ್ತರ ನಡುವೆ ಸಣ್ಣ ಪ್ರಮಾಣದ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಜೆಎಸ್‌ಪಿ ನಾಯಕ ನಾದೆಂದ್ಲಾ ಮನೋಹರ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶಕ್ಕೆ ಪ್ರವೇಶಿಸಲು ಯಾವುದೇ ವೀಸಾ ಅಥವಾ ಪಾಸ್‌ಪೋರ್ಟ್ ಅಗತ್ಯವಿದೆಯೇ ಎಂದು ಕೇಳಿದ್ದಾರೆ.

ಪವನ್ ಕಲ್ಯಾಣ್ ಅವರು ವಾಯುಮಾರ್ಗಗಳ ಮೂಲಕ ಆಂಧ್ರವನ್ನು ತಲುಪಲು ಪ್ರಯತ್ನಿಸಿದರು ಆದರೆ ಕೃಷ್ಣ ಜಿಲ್ಲೆಯ ಪೊಲೀಸರು ಗನ್ನವರಂ ವಿಮಾನ ನಿಲ್ದಾಣಕ್ಕೆ ಅವರ ವಿಶೇಷ ವಿಮಾನವನ್ನು ಅನುಮತಿಸದಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಆದೇಶಿಸಿದ್ದರು.

https://twitter.com/ANI/status/1700619075301576776

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read