ಧಾರವಾಡ: ಬಿಆರ್ ಟಿಸಿ ಚಿಗರಿ ಬಸ್ ಜೆ.ಎಸ್.ಎಸ್ ಕಾಲೇಜು ಕಾಂಪೌಂಡ್ ಗೆ ಡಿಕ್ಕಿ ಹೊಡೆದಿರುವ ಗಹ್ಟನೆ ಧಾರವಾಡದಲ್ಲಿ ನಡೆದಿದೆ.
ಬಿಆರ್ ಟಿಸಿ ಬಸ್ ಕಾಲೇಜಿನ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು, ಗೋಡೆ, ಗ್ರಿಲ್ ಹಾನಿಯಾಗಿದೆ. ಬಸ್ ಡಿಕ್ಕಿ ಹೊಡೆದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಿಆರ್ ಟಿಸಿ ವಿರುದ್ಧ ಪ್ರತಿಭಟನೆ ನಡೆಸಿದೆ.
ರಸ್ತೆ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಬಿಆರ್ ಟಿಸಿ ಮಾರ್ಗದಲ್ಲಿ ಬಸ್ ಗಳು ಸಾಲುಗಟ್ಟಿ ನಿಂತಿದ್ದು, ಬಿಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಜೆ.ಎಸ್.ಎಸ್ ಕಾಲೇಜು ಮುಂದಿನ ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣವಾಗಬೇಕು. ರಸ್ತೆ ಮಧ್ಯದ ವಿಭಜಕವನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.