HomeKarnatakaಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ

ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ

ಬೆಂಗಳೂರು : ಜು. 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿLKG , UKG  ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಕೂಡ ಆರಂಭಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಮಾಡಲಾವುದು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular