ಜು. 13 ರಂದು ಬೆಂಗಳೂರಿನಲ್ಲಿ ಡಾ. ಬಾಬು ಜಗಜೀವನ ರಾಮ್ ಭವನ, ಸಂಶೋಧನೆ- ತರಬೇತಿ ಕೇಂದ್ರ ಉದ್ಘಾಟನೆ

ಬೆಂಗಳೂರು : ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ, ಬಾಬು ಜಗಜೀವನ ರಾಮ್ ಇವರ ಸ್ಮರಣೆಗಾಗಿ ಬೆಂಗಳೂರಿನಲ್ಲಿ ಅತ್ಯಾಕರ್ಷಕವಾದ ಡಾ. ಬಾಬು ಜಗಜೀವನ ರಾಮ್ ಭವನ ಮತ್ತು ಸಂಶೋಧನೆ- ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದರ ಉದ್ಘಾಟನೆಯು ಜುಲೈ 13, ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಭವನವು ಉದ್ಘಾಟನೆಗೊಳ್ಳಲಿದೆ. ಬೆಳಗ್ಗೆ 11 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರುತ್ತೇವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read