HomeIndiaಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು ಬಂಧಿಸಲಾಗಿದೆ.

ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿದೆ. ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಅವರ ಪರವಾಗಿ ಕಿಶೋರ್ ಖರತ್ ಮತ್ತು ಆನಂದ್ ಖರತ್ ಅವರು ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಮ್ಮ ತಂದೆಯವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಡೆ ಹಿಡಿದಿದ್ದಾರೆ. ಖಾಸಗಿ ವ್ಯಕ್ತಿಗಳ ಮೂಲಕ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸತಾರಾ ಹೋಟೆಲ್‌ನಲ್ಲಿ ಬಲೆ ಬೀಸಿ ಪೊಲೀಸರು ನ್ಯಾಯಾಧೀಶರನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗಿದೆ. ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿರುವುದು ಗಮನಾರ್ಹವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular