ಜೂ.14 ರಿಂದ ‘SSLC’ ಪರೀಕ್ಷೆ-2 ಆರಂಭ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ..!

ಬೆಂಗಳೂರು : ಜೂ.14 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜೂ.14 ರಿಂದ 22 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು-2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಿ ಆದೇಶಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಮುಚ್ಚಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಎಸ್ಎಸ್ಎಲ್ಸಿ ಪರೀಕ್ಷೆ-2 ರ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read