HomeLatest Newsಜೂ. 21 ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

ಜೂ. 21 ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಜೂನ್ 21ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಎಐಸಿಸಿ ವರಿಷ್ಠರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಸಾರಥ್ಯ ವಹಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅವರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಿಸಿ ಕಳೆದ ವಾರ ಎಐಸಿಸಿ ಆದೇಶಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಕೆ. ಹರಿಪ್ರಸಾದ್ ಅಭ್ಯರ್ಥಿಯಾಗಿದ್ದು, ಮತ್ತೊಮ್ಮೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಲಿದ್ದಾರೆ. ಜೂನ್ 21ರಂದು ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular