ಸೆಪ್ಟೆಂಬರ್ 27ರಂದು ತೆರೆ ಕಂಡಿದ್ದ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಚಿತ್ರ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ‘ದೇವರ’ ಸಿನಿಮಾ ಬಿಡುಗಡೆಯಾದ ಮೂರು ದಿನಗಳಲ್ಲಿ 304 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಚಿತ್ರ ತಂಡ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಜೂನಿಯರ್ ಎನ್ ಟಿ ಆರ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಆಕ್ಷನ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ , ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ನರೈನ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್, ಗೆಟಪ್ ಶ್ರೀನು, ಉಳಿದ ಪಾತ್ರವರ್ಗದಲ್ಲಿದ್ದಾರೆ. ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದು, ಎ. ಶ್ರೀಕರ್ ಪ್ರಸಾದ್ ಅವರ ಸಂಕಲನ, ಹಾಗೂ ಆರ್.ರತ್ನವೇಲು ಛಾಯಾಗ್ರಹಣವಿದೆ.