ಸೆಪ್ಟೆಂಬರ್ 27 ರಂದು ತೆರೆಕಂಡಿದ್ದ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಈ ಸಿನಿಮಾ ಇದೀಗ ಮಾರ್ಚ್ 28 ರಂದು ಜಪಾನ್ ನಲ್ಲಿ ರಿಲೀಸ್ ಆಗುತ್ತಿದೆ.
ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ. ಜಪಾನ್ ನಲ್ಲಿ ಜೂನಿಯರ್ ಎನ್ಟಿಆರ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿದ್ದಾರೆ.
ಕೊರಟಾಲ ಶಿವ ನಿರ್ದೇಶನದ ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಸೇರಿದಂತೆ ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೋ, ಹರಿ ತೇಜ, ಗೆಟಪ್ ಶ್ರೀನು, ಭಾರ್ಗವಿ ಹಾಗೂ ಈಶ್ವರ್ ರೆಡ್ಡಿ ಬಣ್ಣ ಹಚ್ಚಿದ್ದು, ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.
ಯುವ ಸುಧಾ ಆರ್ಟ್ಸ್ ಹಾಗೂ ಎಂಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಪ್ರಸಾದ್ ಸಂಕಲನ ಹಾಗೂ ಆರ್. ರತ್ನವೇಲು ಅವರ ಛಾಯಾಗ್ರಹಣವಿದೆ.