ಜೂನಿಯರ್ NTR ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ದೇವರ’ ನಾಳೆ ವಿಶ್ವಾದ್ಯಂತ ತೆರೆಮೇಲೆ ಬರಲಿದ್ದು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಚಿತ್ರ ತನ್ನ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿದ್ದು, ಬಾಕ್ಸ್ ಆಫೀಸ್ ಧೂಳೆಬ್ಬಿಸಲು ಸಜ್ಜಾಗಿದೆ.
ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಜಾನ್ವಿ ಕಪೂರ್ ಅಭಿನಯಿಸಿದ್ದಾರೆ. ಇನ್ನುಳಿದಂತೆ ಸೈಫ್ ಅಲಿ ಖಾನ್, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ, ನರೇನ್, ಕಲೈಯರಸನ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್ ಬಣ್ಣ ಹಚ್ಚಿದ್ದಾರೆ. ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದು, ಶ್ರೀಕಾರ್ ಪ್ರಸಾದ್ ಸಂಕಲನ, ಆರ್ ರತ್ನ ವೇಲು ಛಾಯಾಗ್ರಹಣವಿದೆ. ಯುವಸುಧಾ ಆರ್ಟ್ಸ್ ಹಾಗೂ ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಂದಮೂರಿ ಕಲ್ಯಾಣ್ ರಾಮ್ ನಿರ್ಮಾಣ ಮಾಡಿದ್ದಾರೆ.
On edge of the destruction 🤙🏻🤙🏻
Tomorrow his reign of terror will sweep across the lands 🔥🔥#Devara #DevaraOnSep27th
Man of Masses @tarak9999 #JanhviKapoor #KoratalaSiva @anirudhofficial @NTRArtsOfficial @YuvasudhaArts #TeluguFilmNagar pic.twitter.com/SsWDk6oC6F
— Telugu FilmNagar (@telugufilmnagar) September 26, 2024