ಗಮನಿಸಿ : ನಿಮ್ಮ ಸಮಸ್ಯೆಯನ್ನ ಈ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿದ್ರೆ ಸಾಕು, ಶೀಘ್ರ ಪರಿಹಾರ ಸಿಗುತ್ತೆ

ಬೆಂಗಳೂರು : ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. ನಿಮ್ಮ ಸಮಸ್ಯೆಯನ್ನ ಈ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿದ್ರೆ ಸಾಕು, ಶೀಘ್ರವೇ ಪರಿಹಾರ ಸಿಗುತ್ತದೆ.

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ. ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ  ಟ್ಯಾಗ್ ಮಾಡುವ ಮೂಲಕ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.

ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ . ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು. ಕಛೇರಿಯ ಸೇವೆಗಳನ್ನು ಸದ್ಬಳಕೆ ಮಾಡುವ ಉದ್ದೇಶದಿಂದ ವೈಯಕ್ತಕ ಸಮಸ್ಯೆಗಳನ್ನು ಹೊರತುಪಡಿಸಿ ನೈಜವಾದ ಮತ್ತು ಸಂಪೂರ್ಣವಾದ ಮಾಹಿತಿಯನ್ನು ನೀಡುವಂತೆ ಕೋರಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read