BREAKING: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರನ್ನು ಉಪಲೋಕಾಯುಕ್ತರಾಗಿ ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪಿಎಸ್ಐ ನೇಮಕಾತಿ ಹಗರಣದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅವರು ತನಿಖೆ ನಡೆಸಿ ವರದಿ ಸಲ್ಲಿಸಿದ್ದರು.

ನ್ಯಾ. ವೀರಪ್ಪ ಅವರು, ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿ, ಭ್ರಷ್ಟಾಚಾರ ತಡೆ ಕಾಯ್ದೆಯ ಅಧಿಕಾರವನ್ನು ಮತ್ತೆ ಲೋಕಾಯುಕ್ತಕ್ಕೆ ನೀಡಿದ್ದ ಹೈಕೋರ್ಟ್ ಪೀಠದ ನೇತೃತ್ವ ವಹಿಸಿದ್ದರು.

ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ನ್ಯಾಯಮೂರ್ತಿ ವೀರಪ್ಪ ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ(ಕೆಎಸ್‌ಎಲ್‌ಎಸ್‌ಎ) ಅಧ್ಯಕ್ಷರಾಗಿ ಅತಿ ಹೆಚ್ಚು ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ದಾಖಲೆ ನಿರ್ಮಿಸಿದ್ದಾರೆ.

ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರ್ಕಾರ ಕ್ರಮದಲ್ಲಿ ನ್ಯಾಯಮೂರ್ತಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು. ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read