ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿ ನಡೆದಿದೆ.
ಇಲ್ಲಿನ ಪ್ರೇಮ್ ಶಿವ ಜ್ಯುವೆಲ್ಲರಿ ಶಾಪ್ ಗೆ ಗ್ರಾಹಕರ ಸೋಗಿನಲ್ಲಿ ಕಾರಿನಲ್ಲಿ ಬಂದ 6 ಜನ ದುಷ್ಕರ್ಮಿಗಳ ತಂಡ, ಚಿನ್ನದಂಗಡಿ ದರೋಡೆಗೆ ಯತ್ನಿಸಿದೆ. ಈ ವೇಳೆ ಚಿನ್ನದಂಗಡಿ ಮಾಲೀಕ ವಿರೋಧ ವ್ಯಕ್ತಪಡಿಸಿದಾಗ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಾಲೀಕನ ಕಾಲಿಗೆ ಗುಂಡೇಟು ತಗುಲಿದೆ. ಗಾಯಾಳು ಚಿನ್ನದಂಗಡಿ ಮಾಲೀಕನನ್ನು ಪುನ್ನಾರಾಮ್ ಎಂದು ಗುರುತಿಸಲಾಗಿದೆ.
ಬುಲೆರೋ ವಾಹನದಲ್ಲಿ ಬಂದ ಆರು ಜನ ದುಷ್ಕರ್ಮಿಗಳಿಂದ ಈ ದಾಳಿ ನಡೆದಿದೆ. ಸದ್ಯ ಗಾಯಾಳು ಪುನ್ನರಾಮ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿನ್ನದಂಗಡಿಯಲ್ಲಿ 2 ಜೀವಂತ ಗುಂಡುಗಳು ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರ ಪತ್ತೆಗೆ ಬಲೆ ಬೀಸಲಾಗಿದೆ.

