HomeKarnatakaಅನುದಾನಿತ ನೌಕರರಿಗೂ ನಗದು ರಹಿತ ಚಿಕಿತ್ಸೆಯ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲನೆ: ಸಿಎಂ...

ಅನುದಾನಿತ ನೌಕರರಿಗೂ ನಗದು ರಹಿತ ಚಿಕಿತ್ಸೆಯ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ ರಾಜ್ಯದ ಹಣಕಾಸು ಪರಿಸ್ಥಿತಿ ಗಮನಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತರಿಗೆ ಜ್ಯೋತಿ ಸಂಜೀವಿನಿ ಯೋಜನೆ ಚಿಕಿತ್ಸೆ ಸೌಲಭ್ಯ ಕಲ್ಪಿಸಿದೆ. ಹೃದ್ರೋಗ, ಕ್ಯಾನ್ಸರ್, ನರರೋಗ, ನವಜಾತ ಶಿಶು, ಚಿಕ್ಕ ಮಕ್ಕಳ ಕಾಯಿಲೆ, ಸುಟ್ಟ ಗಾಯ, ಅಪಘಾತಗಳಿಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ಸರ್ಕಾರಿ ನೌಕರರಿಗೆ ಮಾತ್ರ ರೂಪಿಸಲಾಗಿದೆ. ಅನುದಾನಿತ ನೌಕರರಿಗೆ ಯೋಜನೆ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 821 ಪಿಯು ಕಾಲೇಜುಗಳಲ್ಲಿ 5848 ನೌಕರರು, 3756 ಪ್ರೌಢಶಾಲೆಗಳಲ್ಲಿ 24,383 ನೌಕರರು, 2686 ಪ್ರಾಥಮಿಕ ಶಾಲೆಗಳಲ್ಲಿ 11,677 ನೌಕರರು ಕಾರ್ಯನಿರ್ವಹಿಸುತ್ತಿದ್ದು, ಹಣಕಾಸು ಪರಿಸ್ಥಿತಿಯನ್ನು ನೋಡಿಕೊಂಡು ಅನುದಾನಿತ ನೌಕರರನ್ನು ಜ್ಯೋತಿ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular