HomeIndiaಬಿಜೆಪಿಗೆ ಕೆ. ಅಣ್ಣಾಮಲೈ ರಾಜೀನಾಮೆ : ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‌ಗೆ 5 ಪುಟಗಳ ರಾಜೀನಾಮೆ ಪತ್ರ...

ಬಿಜೆಪಿಗೆ ಕೆ. ಅಣ್ಣಾಮಲೈ ರಾಜೀನಾಮೆ : ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‌ಗೆ 5 ಪುಟಗಳ ರಾಜೀನಾಮೆ ಪತ್ರ ಸಲ್ಲಿಕೆ

ನವದೆಹಲಿ: ದಕ್ಷಿಣ ಭಾರತದ ರಾಜಕಾರಣದಲ್ಲಿ ಇಂದು ಅತ್ಯಂತ ಆಘಾತಕಾರಿ ಹಾಗೂ ಬೃಹತ್ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ತಮಿಳುನಾಡು ಬಿಜೆಪಿಯ ಫೈರ್ ಬ್ರ್ಯಾಂಡ್ ಲೀಡರ್, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಅಣ್ಣಾಮಲೈ, ತಮ್ಮ 5 ಪುಟಗಳ ಸುದೀರ್ಘ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ವರಿಷ್ಠರು ನೀಡಿದ್ದ ರಾಜ್ಯಸಭಾ ಸ್ಥಾನದ ಆಫರ್ ಅನ್ನು ನಯವಾಗಿಯೇ ನಿರಾಕರಿಸಿರುವ ಅಣ್ಣಾಮಲೈ, ಬಿಜೆಪಿಯೊಂದಿಗಿನ ತಮ್ಮ ಒಡನಾಟವನ್ನು ಕೊನೆಗೊಳಿಸಿದ್ದಾರೆ. ಆ ಮೂಲಕ ಕರ್ನಾಟಕದಲ್ಲೂ ಅಪ್ರತಿಮ ಜನಪ್ರಿಯತೆ ಗಳಿಸಿದ್ದ ‘ಕರುನಾಡ ಸಿಂಗಂ’ ಬಿಜೆಪಿಯ ಮನವೊಲಿಕೆಯ ಎಲ್ಲ ಪ್ರಯತ್ನಗಳನ್ನೂ ವಿಫಲಗೊಳಿಸಿ ಹೊರಬಂದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರಗಳೇ ಈ ಬಿಗ್ ಡೆಸಿಷನ್‌ಗೆ ಪ್ರಮುಖ ಕಾರಣ ಎನ್ನಲಾಗಿದೆ.

ಜೂನ್ 4 ರ ಬರ್ತ್‌ಡೇ ದಿನವೇ ಬಿಗ್ ಅನೌನ್ಸ್‌ಮೆಂಟ್? ರಜನೀಕಾಂತ್ ಸಾಥ್

ಬಿಜೆಪಿಯಿಂದ ಹೊರಬಂದಿರುವ ಅಣ್ಣಾಮಲೈ ಅವರ ಮುಂದಿನ ಹೆಜ್ಜೆ ಏನು ಎಂಬ ಕುತೂಹಲ ಇಡೀ ದೇಶದ ರಾಜಕಾರಣದಲ್ಲಿದೆ. ಮೂಲಗಳ ಪ್ರಕಾರ, ಜೂನ್ 4 ರಂದು ಅಣ್ಣಾಮಲೈ ಅವರ ಹುಟ್ಟುಹಬ್ಬವಿದ್ದು, ಅಂದೇ ಅವರು ತಮ್ಮ ಮುಂದಿನ ರಾಜಕೀಯ ಭವಿಷ್ಯ ಮತ್ತು ಹೊಸ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಹಿಂದ ಮಾದರಿಯಲ್ಲಿ ಹೊಸ ಪ್ರಾದೇಶಿಕ ಪಕ್ಷ: ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ನಟ ವಿಜಯ್ ಅವರ ‘ಟಿವಿಕೆ’ ಪಕ್ಷ ಸರ್ಕಾರ ರಚಿಸಿದ ಬೆನ್ನಲ್ಲೇ ತಮಿಳುನಾಡು ರಾಜಕೀಯ ಭಾರಿ ಬದಲಾವಣೆ ಕಂಡಿದೆ. ಈಗ ಅಣ್ಣಾಮಲೈ ಕೂಡ ಪ್ರಾದೇಶಿಕವಾಗಿ ಅಹಿಂದ ಮಾದರಿಯಲ್ಲಿ, ಹೊಸ ಬಲಪಂಥೀಯ ಸಿದ್ಧಾಂತದೊಂದಿಗೆ ಸ್ವಂತ ರಾಜಕೀಯ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎನ್ನಲಾಗಿದೆ.

ಮಕ್ಕಳ್ ಶಕ್ತಿ ಇಯಕ್ಕಂ (ಜನಶಕ್ತಿ ಆಂದೋಲನ): ಮೊದಲ ಹಂತವಾಗಿ ಅವರು ಮಕ್ಕಳ್ ಶಕ್ತಿ ಇಯಕ್ಕಂ ಎಂಬ ಬೃಹತ್ ಜನ ಚಳವಳಿಯನ್ನು ಆರಂಭಿಸಲಿದ್ದು, ಇದಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರ ಬೆಂಬಲವನ್ನು ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಐಪಿಎಸ್ ವೃತ್ತಿಗೆ ರಾಜೀನಾಮೆ ನೀಡಿದಾಗಲೇ ರಜನೀಕಾಂತ್ ಅವರನ್ನು ಭೇಟಿ ಮಾಡಿದ್ದ ಅಣ್ಣಾಮಲೈ, ಅವರ ಪಕ್ಷ ಸೇರುವ ಆಸೆ ವ್ಯಕ್ತಪಡಿಸಿದ್ದರು. ಆದರೆ ಆಗ ರಜನಿ ಪಕ್ಷ ಆರಂಭಿಸಿರಲಿಲ್ಲ. ಈಗ ಅಣ್ಣಾಮಲೈ ಚಳವಳಿಗೆ ರಜನಿ ಬೆಂಬಲ ನೀಡುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular