ಮೈಸೂರು: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಕೆ.ಬಿ.ಗಣಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೂಲತಃ ಕೊಡಗಿನವರಾದ ಕೆ.ಬಿ.ಗಣಪತಿ ಮುಂನೈನ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮೈಸೂರಿಗೆ ಬಂದು ಇಂಗ್ಲೀಷ್ ನಲ್ಲಿ ಸ್ಟಾರ್ ಆಫ್ ಮೈಸೂರು ಹಾಗೂ ಕನ್ನಡದಲ್ಲಿ ಮೈಸೂರು ಮಿತ್ರ ಪತ್ರಿಕೆಗಳನ್ನು ಆರಂಭಿಸಿದ್ದರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದರು. ಇದೀಗ ಹೃದಯಾಘತದಿಂದ ಕೆ.ಬಿ.ಗಣಪತಿ ನಿಧನರಾಗಿದ್ದಾರೆ