HomeLatest NewsBIG NEWS: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ವಿಧಿವಶ

BIG NEWS: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ವಿಧಿವಶ

ಮೈಸೂರು: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಕೆ.ಬಿ.ಗಣಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೂಲತಃ ಕೊಡಗಿನವರಾದ ಕೆ.ಬಿ.ಗಣಪತಿ ಮುಂನೈನ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮೈಸೂರಿಗೆ ಬಂದು ಇಂಗ್ಲೀಷ್ ನಲ್ಲಿ ಸ್ಟಾರ್ ಆಫ್ ಮೈಸೂರು ಹಾಗೂ ಕನ್ನಡದಲ್ಲಿ ಮೈಸೂರು ಮಿತ್ರ ಪತ್ರಿಕೆಗಳನ್ನು ಆರಂಭಿಸಿದ್ದರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದರು. ಇದೀಗ ಹೃದಯಾಘತದಿಂದ ಕೆ.ಬಿ.ಗಣಪತಿ ನಿಧನರಾಗಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular