ಬೆಂಗಳೂರು: ಬೆಂಗಳೂರಿನಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವಂನಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ದೂರು ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಲೋಕಾಯುಕ್ತ ನ್ಯಾ. ಚೌವ್ಹಾಣ್ ಹಾಗೂ ನ್ಯಾ.ವಿಜಯಾನಂದ ನೇತೃತ್ವದಲ್ಲಿ ದಾಳಿ ನಡೆದಿದ್ದು, ಖುದ್ದು ಆಸ್ಪತ್ರೆ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.