HomeKarnatakaBIG NEWS: ಕೆ.ಸಿ. ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

BIG NEWS: ಕೆ.ಸಿ. ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಮುಖ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಫಣೀಂದ್ರ, ನ್ಯಾ.ಬಿ.ವೀರಪ್ಪ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೋಗಿಗಳಿಂದ ಅಧಿಕ ಹಣ ವಸೂಲಿ, ಸೂಕ್ತ ಚಿಕಿತ್ಸೆ, ಸ್ವಚ್ಚತೆ ಇಲ್ಲದಿರುವ ಬಗ್ಗೆ ರೋಗಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಖುದ್ದು, ರೋಗಿಗಳ ಬಳಿ ಸಮಸ್ಯೆ ವಿಚಾರಿಸಿದ್ದಾರೆ. ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular