HomeKarnatakaBIG NEWS: ಮಂಡ್ಯವನ್ನು ಯಾಕೆ ಜೆಡಿಎಸ್ ಗೆ ಬಿಟ್ಟು ಕೊಡಬೇಕು? ಸುಮಲತಾ ಅವರೇ ಸ್ಪರ್ಧಿಸಲಿ ಎಂದ...

BIG NEWS: ಮಂಡ್ಯವನ್ನು ಯಾಕೆ ಜೆಡಿಎಸ್ ಗೆ ಬಿಟ್ಟು ಕೊಡಬೇಕು? ಸುಮಲತಾ ಅವರೇ ಸ್ಪರ್ಧಿಸಲಿ ಎಂದ ಮಾಜಿ ಸಚಿವ ನಾರಾಯಣಗೌಡ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸಂಸದೆ ಸುಮಲತಾ ಕೂಡ ಬಿಜೆಪಿಗೆ ಬೆಂಬಲ ಘೋಷಿಸಿರುವುದರಿಂದ ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಬೆಂಬಲಿಗರು ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗಿ ಚರ್ಚೆ ನಡೆಸಿದ್ದು, ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಸಂಸದೆ ಸುಮಲತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ.ನಾರಾಯಣಗೌಡ, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯವನ್ನು ಯಾಕೆ ಜೆಡಿಎಸ್ ಗೆ ಬಿಟ್ಟುಕೊಡಬೇಕು? ಸುಮಲತಾ ಅವರೇ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ ಎಂದು ಹೇಳಿದರು.

ಮಂಡ್ಯದಲ್ಲಿ ಬಿಜೆಪಿ ಚಿಗುರುತ್ತಿದೆ. ಬಿಜೆಪಿ ಹೈಕಮಾಂಡ್ ಸುಮಲತಾ ಸ್ಪರ್ಧೆಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಇನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ನಮ್ಮ ವಿರೋಧವಿಲ್ಲ ಕುಮಾರಸ್ವಾಮಿ ಜೊತೆ ಸುಮಲತಾ ಮಾತನಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮಂಡ್ಯದಿಂದ ಸುಮಲತಾ ಅವರೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular