ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಅಸಮಾಧಾನ ತಣಿಸುವ ಯತ್ನದಲ್ಲಿರುವಾಗಲೇ ಮತ್ತೋರ್ವ ಸಚಿವ ಮುನಿಯಪ್ಪ ಕೂಡ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಹೆಚ್.ಮುನಿಯಪ್ಪ, ಬಹಿರಂಗವಾಗಿಯೇ ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಹಂಚಿಕೆಯಲ್ಲಿ ಸಿನಿಯಾರಿಟಿ ಪರಿಗಣಿಸಿಲ್ಲ. ತನಗೆ ಆಹಾರ ಖಾತೆ ನೀಡಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆ ಕೇಳಿದ್ದೆ. ಖಾತೆ ಹಂಚಿಕೆಯಲ್ಲಿ ಸಿನಿಯಾರಿಟಿ ಮೆಂಟೇನ್ ಮಾಡಿಲ್ಲ ಎಂದು ತಿಳಿಸಿದರು.
ಎಐಸಿಸು ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಾಯಿ ಸ್ಥಾನದಲ್ಲಿದ್ದಾರೆ. ಅವರು ಹಿರಿಯನವನ್ನು ಪರಿಗಣಿಸಬೇಕಿತ್ತು. ನನಗೆ ನೀಡಿರುವ ಖಾತೆ ಸೂಕ್ತವಾಗಿಲ್ಲ. ರಾಮಲಿಂಗಾರೆಡ್ಡಿ ಹಾಗೂ ನಾನು 7-8 ಬಾರಿ ಶಾಸಕರಾಗಿ ಆಯ್ಕೆಯಾದವರು. ನಮ್ಮ ಹಿರಿತನಕ್ಕೆ ತಕ್ಕನಾದ ಖಾತೆಗಳನ್ನು ಕೊಡಬೇಕು. ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡುತ್ತೇನೆ. ಈ ರೀತಿ ಆದರೆ 2028ರ ಚುನಾವಣೆಯಲ್ಲಿ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.
ರಾಮಲಿಂಗಾರೆಡ್ದಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್ನಲ್ಲೇ ಇದೀಗ ಆಹಾರ ಖಾತೆಗೆ ಕೆ.ಹೆಚ್ ಮುನಿಯಪ್ಪ ಕೂಡ ರಾಜೀನಾಮೆಗೆ ಚಿಂತನೆ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಮೊದಲ ಹಂತದ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಖಾತೆ ವಿಚಾರಾಗಿ ಹಿರಿಯ ಸಚಿವರೇ ಅಸಮಾಧಾನ ಹೊರ ಹಾಕುತ್ತಿರುವುದು ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಸಚಿವರ ಅಸಮಾಧಾನ ಶಮನಕ್ಕೆ ಡಿ.ಕೆ.ಶಿವಕುಮಾರ್ ಮುಂದಿನ ನಡೆ ಏನು? ಎಂಬುದು ಕುತೂಹಲ ಮೂಡಿಸಿದೆ.

