ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧ ಕೇಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಇಂಧನ ಇಲಾಖೆ ಅಧಿಅಕರಿಗಳ ವಿರುದ್ಧ ಖಾಸಗಿ ದೂರು ದಾಖಲಿಸ್ದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಎಂ.ಐ.ಅರುಣ್ ಅವರಿದ್ದ ಪೀಠ, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆಯ ಗೌರವ್ ಗುಪ್ತಾ, ಬೆಸ್ಕಾಂ ನ ಮಹಾಂತೇಶ್ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ರದ್ದು ಪಡಿಸಿ ಆದೇಶ ಹೊರಡಿಸಿದೆ.
