HomeLatest Newsಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು: ಸಚಿವ ಕೆ.ಜೆ ಜಾರ್ಜ್ ಅವರ ಬೆಂಗಾಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ ಅಮೃತ ಮಹಲ್ ಬಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಕೆ.ಜೆ. ಜಾರ್ಜ್‌ ಅವರು ಬರ ವೀಕ್ಷಣೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರವಾಸದಲ್ಲಿದ್ದಾರೆ. ಅಮೃತ್ ಮಹಲ್ ಸಂವರ್ಧನ ತಳಿ ಕೇಂದ್ರದತ್ತ ವಾಹನ ತೆರಳುತ್ತಿದ್ದಾಗ, ಅವರ ಬೆಂಗಾವಲು ವಾಹನ ಕೇಂದ್ರದ ಗೇಟ್‌ಗೆ ಡಿಕ್ಕಿ ಹೊಡೆದಿದೆ.

ಸಚಿವರ ಭ್ರದ್ರತೆಯಲ್ಲಿದ್ದ ಪೊಲೀಸ್‌ ಜೀಪ್‌ನ ಚಾಲಕ ತಿರುವಿನಲ್ಲಿ ಬ್ರೇಕ್‌ ಹಾಕಲು ಮುಂದಾದಾಗ ಜೀಪ್ ನಿಯಂತ್ರಣ ಕಳೆದುಕೊಂಡು ಗೇಟ್ ಗೆ ಗುದ್ದಿದೆ. ಜೀಪ್ ಮುಂಭಾಗ ಡ್ಯಾಮೇಜ್ ಆಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular