Milk Price Hike : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು.

ಇನ್ನೂ,. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದು, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಇದೇ ಪರಿಸ್ಥಿತಿ ಮುಂದುವರೆದರೆ ಹಾಲು ಸಂಗ್ರಹ ಕಡಿಮೆಯಾಗುತ್ತದೆ. ರೈತರಿಗೆ ಹೆಚ್ಚು ಹಣ ನೀಡಲು ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕೆಂದು ಸಿಎಂಗೆ ಮನವಿ ಮಾಡಲಿದ್ದು, ಜು. 11 ರಂದು ನಿಯೋಗ ತೆರಳಲು ತೀರ್ಮಾನಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read