ಬೆಂಗಳೂರು : ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು. ಮಾತು ಮನೆ ಕೆಡಿಸಿತು , ತೂತು ಒಲೆ ಕೆಡಿಸಿತು ಎಂಬ ಮಾತಿದೆ. ಇದರಲ್ಲಿ ನಮ್ಮ ನಾಯಕರ ಷಡ್ಯಂತ್ರ ಏನೂ ಇಲ್ಲ. ಪಕ್ಷದ ಮೇಲೆ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ ಎಂದರು.
ರಾಜಣ್ಣ ಅವರ ಬ್ರೈನ್ ಮ್ಯಾಪಿಂಗ್ ಮಾಡಿದರೆ ಎಲ್ಲಾ ಗೊತ್ತಾಗುತ್ತದೆ, ಯಾರ ಜೊತೆ ಅವರು ಸಂಪರ್ಕದಲ್ಲಿದ್ದಾರೆ ಎಂದು ತಿಳಿಯುತ್ತದೆ. ನಮ್ಮ ಸರ್ಕಾರ ಇದೆ ಅಂತ ಅವರು ನಮ್ಮ ಪಕ್ಷದಲ್ಲಿ ಇದ್ದಾರೆ,ಇಲ್ಲದಿದ್ರೆ ಪಕ್ಷ ಬಿಟ್ಟು ಹೋಗುತ್ತಿದ್ದರು ಎಂದು ಬಾಲಕೃಷ್ಣ ಹೇಳಿದ್ದಾರೆ.
You Might Also Like
TAGGED:ಕೆ.ಎನ್ ರಾಜಣ್ಣ