ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತೆ ಹೈಕಮಾಂಡ್ ಗೆ ದೂರು ನೀಡಲು ಮುಂದಾಗಿದ್ದಾರೆ.
ಈ ಹಿಂದೆ ಹೈಕಮಾಂಡ್ ನಾಯಕರಿಗೆ ದೂರು ನೀಡಲು ಮುಂದಾಗಿದ್ದರು. ಆದರೆ ಸಾಧ್ಯವಾಗಿರಲಿಲ್ಲ. ಇದೀಗ ಗುಜರಾತ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನಕ್ಕೆ ತೆರಳಲಿರುವ ಸಚಿವ ರಾಜಣ್ಣ, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಹನಿಟ್ರ್ಯಾಪ್ ಬಗ್ಗೆ ದೂರು ನೀಡಲಿದ್ದಾರೆ.
ಮತ್ತೊಮ್ಮೆ ದೂರು ನೀಡುವ ಬಗ್ಗೆ ಈಗಗಲೇ ರಾಜ್ಯ ನಾಯಕರೊಂದಿಗೆ ಸಚಿವರು ಚರ್ಚೆಯನ್ನು ನಡೆಸಿದ್ದಾರೆ. ಗುಜರಾತ್ ನಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಈ ಬಗ್ಗೆ ಸುದ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಸೂಚಿಸಲು ಮನವಿ ಮಾಡಲಿದ್ದಾರೆ.