HomeKarnatakaBREAKING NEWS: ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ಸಚಿವ ಕೆ.ಎನ್.ರಾಜಣ್ಣ ಹೇಳಿಕೆ

BREAKING NEWS: ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ಸಚಿವ ಕೆ.ಎನ್.ರಾಜಣ್ಣ ಹೇಳಿಕೆ

ತುಮಕೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೊನೆಗೂ ಸ್ಪಷ್ಟಪಡಿಸಿದ್ದು, ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನಿಸಿದ್ದರು ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು. ಎರಡು ಬಾರಿಯೂ ಬಂದಿದ್ದು ಬೇರೆ ಬೇರೆ ಹುಡುಗಿಯರು. ಮೊದಲ ಬಾರಿ ತಾನು ಲಾಯರ್ ಎಂದು ಹೇಳಿರಲಿಲ್ಲ. ಎರಡನೇ ಬಾರಿ ಬಂದವಳು ತಾನು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡು ಬಂದಿದ್ದಳು ಎಂದು ತಿಳಿಸಿದ್ದಾರೆ.

ತಾನು ಲಾಯರ್ ನಿಮ್ಮ ಬಳಿ ಪರ್ಸನಲ್ ಆಗಿ ಮಾತನಾಡಬೇಕು ಎಂದು ಹೇಳಿ ಬಂದಿದ್ದಳು. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಈ ನಿಟ್ಟಿನಲ್ಲಿ ಇಂದು ದೂರು ನೀಡುತ್ತಿದ್ದೇನೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular