HomeLatest NewsBREAKING: ಸಂಪುಟದಿಂದ ಕೆ.ಎನ್.ರಾಜಣ್ಣ ಉಚ್ಚಾಟನೆ ಸಾಧ್ಯತೆ

BREAKING: ಸಂಪುಟದಿಂದ ಕೆ.ಎನ್.ರಾಜಣ್ಣ ಉಚ್ಚಾಟನೆ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಸಹಕಾರ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡುತ್ತಿದ್ದಾರೆ. ಈಗಾಗಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಣ್ಣ ರಾಜೀನಾಮೆ ಪಡೆಯಲು ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ರಾಜಣ್ಣ, ನಾನು ಸಿಎಂ ಭೇಟಿಗೆ ಹೋಗುತ್ತಿದ್ದೇನೆ. ಸಿಎಂ ಭೇಟಿ ಬಳಿಕ ಮಾತನಾಡುತ್ತೇನೆ. ನನಗೆ ಈವರೆಗೆ ಯಾವುದೇ ಸೂಚನೆ ಬಂದಿಲ್ಲ ಎಂದಿದ್ದಾರೆ.

ಒಂದುವೇಳೆ ರಾಜಣ್ಣ ರಾಜೀನಾಮೆ ನೀಡದಿದ್ದರೆ ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತಗಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಆರೋಪಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಹೈಕಮಾಂಡ್ ರಾಜಣ್ಣ ವಿರುದ್ಧ ಗರಂ ಆಗಿದ್ದು, ರಾಜೀನಾಮೆಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular