ಬೆಂಗಳೂರು : ಸಚಿವ ಸ್ಥಾನಕ್ಕೆ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ಹೊತ್ತಿನಲ್ಲಿ ಸಿದ್ದರಾಮಯ್ಯಗೆ ಅವರು ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಚುನಾವಣೆಯಲ್ಲಿ ಮತಗಳ್ಳತನ ವಿಚಾರದ ಬಗ್ಗೆ ಗೊಂದಲದ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತಂದಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಒತ್ತಾಯಿಸಲಾಗಿತ್ತು. ಈ ಕುರಿತಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಸುಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಪ್ರಕಾಶ್ ಪತ್ರ ಬರೆದಿದ್ದರು..
ಮತಗಳ್ಳತನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಳಿಕೆ ನೀಡಿ ಕೆ.ಎನ್. ರಾಜಣ್ಣ ಪಕ್ಷಕ್ಕೆ ಮುಜುಗರ ತಂದಿದ್ದಾರೆ. ಹಿಂದೆಯೂ ಇದೇ ರೀತಿ ಪಕ್ಷದ ಬಗ್ಗೆ ನಕಾರಾತ್ಮಕ ಹೇಳಿಕೆ ನೀಡಿದ್ದರು. ಹಿರಿಯ ನಾಯಕರಾಗಿದ್ದರೂ ಪ್ರತಿ ಬಾರಿ ಗೊಂದಲದ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ನಿಯಮ ಉಲ್ಲಂಘನೆ ಆಧಾರದ ಮೇಲೆ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಲಾಗಿತ್ತು. ಹೈಕಮಾಂಡ್ ಸೂಚನೆ ಮೇರೆಗೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ.