ತುಮಕೂರು: ಸಚಿವ ಸಂಪುಟ ಪುನಾರಚನೆ ಯಾರು ಮಾಡುತ್ತಾರೋ ಅವರೇ ಸಿಎಂ ಆಗುತ್ತಾರೆ. ಸಂಪುಟ ಪುನಾರಚನೆಯಾದರೂ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನ ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ, ಸಿಎಂ ಸಿದ್ದರಾಮಯ್ಯನವರಿಗೆ ಸಂಪುಟ ಪುನಾರಚನೆ ಮಾಡಲು ಹೈಕಮಾಂಡ್ ಒಪ್ಪಿಗೆ ಕೊಟ್ಟರೆ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು.
ರಾಜಕೀಯ ಬೆಳವಣಿಗೆ ಎಲ್ಲವೂ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ನಡೆಯಲಿದೆ. ಅಲ್ಲಿಯವರೆಗೂ ಯಾವುದೇ ಬೆಳವಣಿಗೆ ಇಲ್ಲ ಎಂದು ತಿಳಿಸಿದ್ದಾರೆ.
ಸಂಪುಟ ಪುನಾರಚನೆಯಾದರೆ ಇನ್ಮುಂದೆ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಮೀಸಲಾತಿ ಇರುವಂತೆ ಒಬಿಸಿಗಳಿಗೆ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಮೀಸಲಾತಿ ಕೊಡಬೇಕು. ಎಸ್ ಸಿ ಎಸ್ ಟಿ ಮೀಸಲು ಕ್ಷೇತ್ರ ಇರುವಂತೆ ಒಬಿಸಿ ಮೀಸಲು ಕ್ಷೇತ್ರ ಕೊಡಬೇಕು ಎಂದರು.
