BIG NEWS: ಮೂರು ಸಮುದಾಯದವರನ್ನು DCM ಮಾಡಿ; ಸಚಿವ ಕೆ.ಎನ್.ರಾಜಣ್ಣ ಆಗ್ರಹ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಮುದಾಯಗಳ ಬೆಂಬಲವನ್ನು ಪಡೆಯುವ ಕಾರಣಕ್ಕೆ ಮೂರು ಸಮುದಾಯಗಳಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ, ಪರಿಶಿಷ್ಟ ಜಾತಿ ಪಂಗಡ ಸಮುದಾಯ, ಅಲ್ಪಸಂಖ್ಯಾತ ಹಾಗೂ ವೀರಶೈವ ಸಮುದಾಯದ ಓರ್ವ ಮುಖಂಡರನ್ನು ಉಪಮುಖ್ಯಮಂತ್ರಿ ಮಾಡಬೇಕು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೂರದೃಷ್ಟಿಯಿಂದಷ್ಟೇ ನನ್ನ ಆಗ್ರಹ ಎಂದು ಹೇಳಿದರು.

ನನ್ನ ಹೇಳಿಕೆಯಿಂದ ಡಿ.ಕೆ.ಶಿವಕುಮಾರ್ ಗೆ ಅಸಮಾಧಾನವಾಗಲಾರದು. ಅವರು ಈಗಾಗಲೇ ಡಿಸಿಎಂ ಆಗಿದ್ದಾರೆ. ಅಲ್ಲದೇ ಅವರಿಗೆ ಪಕ್ಷ ಸಂಘಟನೆ ಮಾಡುವ ಚಾಣಾಕ್ಷತನವಿದೆ. ಅವರು ಅಸಮಾಧಾನಗೊಳ್ಳುವ ಸಂದರ್ಭ ಉದ್ಭವವಾಗಲ್ಲ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯಿತ ಸಮುದಾಯ ಕಾಂಗ್ರೆಸ್ ಕೈಹಿಡಿದಿದೆ. ಈ ಮೂರು ಸಮುದಾಯದವರನ್ನು ಉಪಮುಖ್ಯಮಂತ್ರಿ ಮಾಡಿದರೆ ಪಕ್ಷಕ್ಕೆ ಲಾಭವಾಗುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read