HomeKarnatakaBIG NEWS: ಜೆಡಿಎಸ್ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ; ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಚಿವ...

BIG NEWS: ಜೆಡಿಎಸ್ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ; ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೆ.ಎನ್.ರಾಜಣ್ಣ

ಹಾಸನ: ಜೆಡಿಎಸ್ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ನಮ್ಮ ಗಮನಕ್ಕೆ ತರದೇ ಗೌರಿಶಂಕರ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿರುವುದಕ್ಕೆ ಅಸಮಾಧಾನವಿದೆ. ಅವರ ಸೇರ್ಪಡೆ ಬಗ್ಗೆ ನನಗೆ, ಜಿ.ಪರಮೇಶ್ವರ್ ಅವರಿಗೆ, ಜಿಲ್ಲೆಯ ಉಳಿದ ಕಾಂಗ್ರೆಸ್ ಶಾಸಕರಿಗೆ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮಾಹಿತಿ ಇಲ್ಲ. ಗೌರಿಶಂಕರ್ ಕಾಂಗ್ರೆಸ್ ಗೆ ಸೇರಿದ್ದಾರೆ ಸಂತೋಷ. ನಮ್ಮ ಜಿಲ್ಲೆಯಲ್ಲಿ ಏನೆ ಆದ್ರೂ ಜನ ನಿಭಾಯಿಸುವ ಶಕ್ತಿ ಕೊಟ್ಟಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅನ್ನೋದು ಸಮುದ್ರ ಇದ್ದಂತೆ. ಸಮುದ್ರದಲ್ಲಿ ಗಂಗಾಮಾತೆಯಷ್ಟು ಪವಿತ್ರ ಜಲವೂ ಬರುತ್ತದೆ. ಪಕ್ಕದ ಚರಂಡಿ ನೀರು ಕೂಡ ಬರುತ್ತದೆ. ಸಮುದ್ರದಲ್ಲಿ ಅಮೃತವೂ ಇದೆ. ವಿಷವೂ ಇದೆ. ಅಮೃತ ಸಿಗೋರಿಗೆ ಅಮೃತ ಸಿಗುತ್ತೆ, ವಿಷ ಸಿಗೋರಿಗೆ ವಿಷ ಸಿಗುತ್ತೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular