ಬೆಂಗಳೂರು: ದಿಢೀರ್ ಬೆಳವಣೆಗೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ರಾಜಣ್ಣ, ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜಣ್ಣ ರಾಜೀನಾಮೆ ಪತ್ರ ಸ್ವೀಕರಿಸಿದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪಿಎಸ್ ಡಾ.ವೆಂಕಟೇಶಯ್ಯ ಅವರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಕೆ.ಎನ್.ರಾಜಣ್ಣ ರಾಜೀನಾಮೆ ಪತ್ರ ಅಂಗೀಕರಿಸಿದ್ದಾರೆ. ಶೀಘ್ರದಲ್ಲೇ ರಾಜ್ಯಪಾಲರಿಗೆ ರಾಜಣ್ಣ ರಾಜೀನಾಮೆ ಅಂಗೀಕಾರದ ಪತ್ರವನ್ನು ಸಿಎಂ ರವಾನಿಸಲಿದ್ದಾರೆ.