ತುಮಕೂರು: 2028 ರಲ್ಲಿ ಮಧುಗಿರಿಗೆ ನನ್ನ ಮಗಳು ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸುಳಿವು ನೀಡಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, 2028ರ ವಿಧಾನಸಭೆ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ತಮ್ಮ ಪುತ್ರಿ ರಶ್ಮಿ ಅವರನ್ನು ಅಭ್ಯರ್ಥಿ ಮಾಡುವ ಬಗ್ಗೆ ಅವರು ಸುಳಿವು ನೀಡಿದ್ದಾರೆ.
2028ರ ವಿಧಾನಸಭೆ ಚುನಾವಣೆಯಲ್ಲಿ ಮಧುಗಿರಿ ಮಹಿಳಾ ಮೀಸಲು ಪ್ರಕಟವಾದರೆ ನನ್ನ ಪುತ್ರಿ ರಶ್ಮಿ ಅವರನ್ನೇ ಅಭ್ಯರ್ಥಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

