HomeKarnatakaಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಓರ್ವ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಓರ್ವ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಓರ್ವ ಸಾವು ಪ್ರಕರನಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಕೆ.ಆರ್.ನಗರ ಠಾಣೆಯ ಇನ್ಸ್ ಪೆಕ್ಟರ್, ಎಎಸ್ಐ ಹಾಗೂ ಮುಖ್ಯಪೇದೆಯನ್ನು ಅಮಾನತುಗೊಳಿಸಲಾಗಿದೆ. ಸಂತ್ರಸ್ತೆಯ ಪೋಷಕರು ನೀಡಿದ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕೆ.ಆರ್.ನಗರ ಠಾಣೆಯ ಇನ್ಸ್ ಪೆಕ್ಟರ್ ಪಿ.ಪಿ.ಸಂತೋಷ್, ಎಎಸ್ಐ ಗಿರೀಶ್, ಮುಖ್ಯಪೇಡೆ ರಾಘವೇಂದ್ರ ಅವರನ್ನು ಅಮಾನತುಗೊಳಿಸಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮೃತ ಮಹದೇವ ನಾಯಕ ಅವರ ಮೊಮ್ಮಗಳನ್ನು ಲೋಕೇಶ್ ಪ್ರೀತಿಸುತ್ತಿದ್ದ. ಬಾಲಕಿಯ ಖಾಸಗಿ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ದೂರು ನೀಡಿದರು ಪೊಲೀಸರಿಂದ ನ್ಯಾಯ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದರು. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಹದೇವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular