ಕೆರಗೋಡು ಬಳಿಕ ಕೆ.ಆರ್.ಪೇಟೆಯಲ್ಲಿ ಭಗವಾಧ್ವಜ ತೆರವು: ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ಮಂಡ್ಯ: ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ವಿವಾದ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕೆ.ಆರ್.ಪೇಟೆ ಪಟ್ಟಣದಲ್ಲಿ ಅಳವಡಿಸಲಾಗಿದ್ದ ಭಗವಾಧ್ವಜವನ್ನು ತೆರವುಗೊಳಿಸಲಾಗಿದ್ದು, ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೆ.ಆರ್.ಪೇಟೆಯ ಟಿಬಿ ವೃತ್ತದಲ್ಲಿ ಹಾಕಲಾಗಿದ್ದ ಭಗವಾಧ್ವಜವನ್ನು ಹಾಗೂ ಹಲವು ಮಹನೀಯರ ಫ್ಲೆಕ್ಸ್ ಗಳನ್ನು ಪುರಸಭೆ ಅಧಿಕಾರಿಗಳು ತೆರವು ಮಾಡಿದ್ದಾರೆ. ಇದನ್ನು ವಿರೋಧಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸ್ಥಳದಲ್ಲಿ ಧರಣಿ ನಡೆಸಿದ್ದಾರೆ.

ಹತ್ತಾರು ವರ್ಷಗಳಿಂದ ಇದ್ದ ಭಗವಾಧ್ವಜವನ್ನು ಈಗ ಏಕಾಏಕಿ ತೆರವುಗೊಳಿಸಿದ್ದು ಯಾಕೆ? ಭಗವಾಧ್ವಜದ ಜೊತೆಗೆ ಧ್ವಜ ಕಂಬವನ್ನೂ ತೆರವುಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read